- Advertisement -
![]()
- Advertisement -
ಕಾರ್ಕಳ : ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಪ್ರೇರಣಾ ಮೃತ ವಿದ್ಯಾರ್ಥಿನಿ.
ಎ. 24ರಂದು ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಪ್ರೇರಣಾ ತಂದೆ ನವೀನ್ ಚಂದ್ರ ಅವರೊಂದಿಗೆ ಸಿಇಟಿ ಪರೀಕ್ಷೆ ಬರೆದು ಮನೆಗೆ ವಾಪಸ್ಸಾಗುತ್ತಿದ್ದಾಗ ನಿಟ್ಟೆ ಇಂಜೀನಿಯರಿಂಗ್ ಕಾಲೇಜು ವಿದ್ಯಾರ್ಥಿಯ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಪ್ರೇರಣಾ ಹಾಗೂ ತಂದೆ ನವೀನ್ ಚಂದ್ರ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಪ್ರೇರಣಾ ತಂದೆ ನವೀನ್ ಸಾವನ್ನಪ್ಪಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರೇರಣಾ ಕೂಡ ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಕೊನೆಯುಸಿರೆಳೆದಿದ್ದಾರೆ.
ತಂದೆ ಮಗಳು ಇಬ್ಬರನ್ನು ಕಳೆದುಕೊಂಡು ಕುಟುಂಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -


