Thursday, June 25, 2026
Homeಅಪರಾಧಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ; ಮೂವರು ವೈದ್ಯರು ಜೈಲು ಪಾಲು

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ; ಮೂವರು ವೈದ್ಯರು ಜೈಲು ಪಾಲು

- Advertisement -
- Advertisement -

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಓರ್ವ ಮಹಿಳಾ ವೈದ್ಯೆ ಸೇರಿದಂತೆ ಮೂವರು ವೈದ್ಯರನ್ನು ಕೆ.ಆರ್.ಪೇಟೆ ಪಟ್ಟಣ ಮತ್ತು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 

ಬಂಧಿತರಾದ ಕೆ.ಆರ್.ಪೇಟೆಯ ಚೇತನ ಮೆಟರ್ನಿಟಿ ಸೆಂಟರ್‌ನ ಡಾ.ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ.ವೈ.ಆರ್.ಹರ್ಷಿತ್, ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್‌ನ ಡಾ.ಹರೀಶ್ ಅವರ ವಿರುದ್ಧ ಒಟ್ಟು 12 ಮೊಕದ್ದಮೆ ದಾಖಲಾಗಿದೆ. 

ಇನ್ನು ನಾಪತ್ತೆಯಾಗಿರುವ ಮತ್ತೋರ್ವ ಮಹಿಳಾ ವೈದ್ಯೆ  ಡಾ.ಪ್ರಿಯಾಂಕಾಗಾಗಿ ಪೊಲೀಸರು ಜಾಲ ಬೀಸಿದ್ದಾರೆ.   

ಸರ್ಕಾರಿ ಆಸ್ಪತ್ರೆಗಳ ಸ್ಕ್ಯಾನಿಂಗ್ ಯಂತ್ರಗಳನ್ನ ಅಕ್ರಮವಾಗಿ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳಲ್ಲಿ ಬಳಕೆ ಆರೋಪ ಕೇಳಿಬಂದಿದೆ. ಸಾರ್ವಜನಿಕರಿಂದ ಬಂದ ದೂರು ಆಧರಿಸಿ ತನಿಖೆಗೆ ಆದೇಶಿಸಿದ್ದ ಉಪ ಲೋಕಾಯುಕ್ತ ಬಿ.ವೀರಪ್ಪ.ಈ ಹಿನ್ನೆಲೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು.ಈ ವೇಳೆ ಕೆ.ಆರ್.ಪೇಟೆಯ ಎರಡು ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್‌ಗಳ ಕೃತ್ಯ ಬಟಾಬಯಲಾಗಿದೆ. ಈ ಸಂಬಂಧ ದೂರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದರು. ದೂರು ಆಧರಿಸಿ ಮೂವರು ವೈದ್ಯರ ಬಂಧನ, ಮತ್ತೋರ್ವ ವೈದ್ಯೆಗಾಗಿ ಶೋಧ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!