- Advertisement -
![]()
- Advertisement -
ಕಡಬ; ಸ್ಕೂಟಿ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಜೊತೆಗಿದ್ದ ಮಹಿಳೆಯ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟ ವ್ಯಕ್ತಿ ಮತ್ತು ಗಾಯಾಳುವಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
- Advertisement -


