ಕಾರ್ಕಳ; ಸ್ಕೂಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಿಯ್ಯಾರು ಗ್ರಾಮದ ಕುಂಟಿಬೈಲು ನೀರಿನ ಟ್ಯಾಂಕ್ ಬಳಿ ನಡೆದಿದೆ. ಸುಕೇಶ ಬಂಗೇರ (36) ಮೃತ ದುರ್ದೈವಿ.
ಸುಕೇಶ ಬಂಗೇರ ಅವರು ಕೆರ್ವಾಶೆ ಕಡೆಯಿಂದ ಮಿಯ್ಯಾರು ಕಡೆಗೆ ತಮ್ಮ ಮೋಟಾರ್ ಸೈಕಲ್‌ನಲ್ಲಿ ಬರುತ್ತಿದ್ದಾಗ, ಎದುರುಗಡೆಯಿಂದ ಅತಿವೇಗವಾಗಿ ಬಂದ ಸ್ಕೂಟಿ ಸವಾರನು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಮಹಾಲಿಂಗೇಶ್ವರ ದೇವಸ್ಥಾನದ ಕಡೆಗೆ ತಿರುಗಿಸಿದ್ದಾನೆ. ಈ ವೇಳೆ ಸ್ಕೂಟಿ ಸುಕೇಶ ಅವರ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಸುಕೇಶ ಅವರನ್ನು ತಕ್ಷಣ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯಾಧಿಕಾರಿಗಳು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮೃತರ ಸಂಬಂಧಿ ಪ್ರಸನ್ನ ಶಂಕರ ಮೂಲ್ಯ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ (BNS) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


