- Advertisement -
![]()
- Advertisement -
ಕಾರ್ಕಳ: ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಬ್ರಿ ಸಮೀಪದ ಪಡುಕುಡೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣ ಬಿ. ಶೆಟ್ಟಿ ಮೃತ ದುರ್ದೈವಿ.
ಕೃಷ್ಣ ಬಿ. ಶೆಟ್ಟಿ ಅವರು ಸುಮಾರು 15 ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ವಿವಿಧ ರೀತಿಯ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎನ್ನಲಾಗಿದೆ. ದಿನಾಂಕ 30/04/2026 ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಕೊಟ್ಟಿಗೆಯ ಮಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅವರ ಪುತ್ರ ಅರುಣ್ ಶೆಟ್ಟಿ (42) ಅವರು ನೀಡಿದ ದೂರಿನ ಆಧಾರದ ಮೇಲೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
- Advertisement -


