- Advertisement -
![]()
- Advertisement -
ಕೋಲ್ಕತ್ತಾ: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂದು ಮರು ಮತದಾನಕ್ಕೆ ಆದೇಶಿಸಿದೆ.
ದಕ್ಷಿಣ 24 ಪರಗಣ ಜಿಲ್ಲೆಯ ಹದಿನೈದು ಬೂತ್‌ಗಳಲ್ಲಿ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಏಪ್ರಿಲ್ 29 ರಂದು ಎರಡನೇ ಹಂತದಲ್ಲಿ ನಡೆದಿದ್ದ ಮತದಾನವನ್ನು ರದ್ದುಗೊಳಿಸಿರುವ ಚುನಾವಣಾ ಆಯೋಗ, ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ ಹನ್ನೊಂದು ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್ ವಿಧಾನಸಭಾ ಕ್ಷೇತ್ರದ ನಾಲ್ಕು ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಆದೇಶ ಹೊರಡಿಸಿದೆ.ಚುನಾವಣಾ ವೀಕ್ಷಕರು ಮತ್ತು ಅಧಿಕಾರಿಗಳ ವರದಿ ಆಧರಿಸಿ ಕೇಂದ್ರ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ.
- Advertisement -


