Thursday, June 4, 2026
Homeತಾಜಾ ಸುದ್ದಿಜೀವಾವಧಿ ಶಿಕ್ಷೆಗೊಳಪಟ್ಟ ಹಿನ್ನೆಲೆ; ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ

ಜೀವಾವಧಿ ಶಿಕ್ಷೆಗೊಳಪಟ್ಟ ಹಿನ್ನೆಲೆ; ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ

- Advertisement -
- Advertisement -

ಬೆಂಗಳೂರು: ಕೊಲೆ ಆರೋಪದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಶಾಸಕ ಸ್ಥಾನದ ಅನರ್ಹತೆ ಬಗ್ಗೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

2015 ರಲ್ಲಿ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅಪರಾಧಿಯಾಗಿದ್ದು, ಕೆಲವು ದಿನಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಸಂವಿಧಾನದ ಆರ್ಟಿಕಲ್ 191(1)(ಇ) ಸೆಕ್ಷನ್ 8ರ ಪ್ರಕಾರ ಪೀಪಲ್ ರೆಪ್ರೆಸೆಂಟೇಟಿವ್ ಆಕ್ಟ್ 1951ರ ಅಡಿಯಲ್ಲಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದ ಅನರ್ಹತೆ ಹಿನ್ನೆಲೆಯಲ್ಲಿ ಧಾರವಾಡ ವಿಧಾ‌ನಸಭಾ ಕ್ಷೇತ್ರ ತೆರವಾಗಿದೆ

- Advertisement -

Latest News

error: Content is protected !!