- Advertisement -
![]()
- Advertisement -
ಚಿಕ್ಕಮಗಳೂರು: ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ನೀರುಪಾಲಾದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ. ಮಹಾದಿಯಾ, ಅರುನುಸ್, ನಾಯುಸ್, ಅಬ್ದುಲ್ ರೆಹಮಾನ್ ಮೃತ ಮಕ್ಕಳು ನೀರುಪಾಲಾದ ಮಕ್ಕಳು. ನಾಲ್ಕು ವರ್ಷದ ಅರ್ಮಾನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮೃತರೆಲ್ಲರೂ 5 ರಿಂದ 14 ವರ್ಷದೊಳಗಿನ ಮಕ್ಕಳಾಗಿದ್ದಾರೆ.
ಬಾತುಕೋಳಿ ಕೆರೆಗೆ ಹೋಯಿತು ಎಂದು ಮಕ್ಕಳು ಹಿಡಿಯಲು ಹೋಗಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಸ್ಪತ್ರೆ ಮುಂಭಾಗ ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -


