
ವಿಟ್ಲ; ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ. ಬಂಟ್ವಾಳ ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26) ಬಂಧಿತ ಆರೋಪಿ.
ದಿನಾಂಕ:03.05.2026 ರಂದು ಮಧ್ಯಾಹ್ನ ವೇಳೆ ವಿಟ್ಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಬಿ ಎಸ್ ನಾಯಕ್, ಪೊಲೀಸ್ ಸಿಬ್ಬಂದಿಯೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ, ಸ್ಕೂಟರ್ ನಲ್ಲಿ ಅದರ ಸವಾರ ಹೆಲ್ಮೇಟ್ ಧರಿಸದೇ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಅತನನ್ನು ತಪಾಸಣೆಗಾಗಿ ತಡೆದು ನಿಲ್ಲಿಸಿದಾಗ, ಆರೋಪಿ ಉಪ ನಿರೀಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾನೆ. ಆತನ ವರ್ತನೆಯಿಂದ ಆಸಾಮಿಯು ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಸಂಶಯಗೊಂಡು ಈ ಬಗ್ಗೆ ವಿಚಾರಿಸಿದಾಗ, ಆತನು ಎಂಬುದಾಗಿ ತಿಳಿಸಿದ್ದು, ತಾನು ಮಾದಕವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿ ಮಾದಕವಸ್ತು ಸೇವನೆ ಧೃಢಪಟ್ಟಿರುತ್ತದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ:100/2026, ಕಲಂ: 27 (b) NDPS Act 1985, 221 BNS ಮತ್ತು KMV Rule 230(1) ಜೊತೆಗೆ 177 IMV Act ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ


