Saturday, June 6, 2026
Homeಕರಾವಳಿಮೇ 6 ರಿಂದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಮೇ 6 ರಿಂದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

- Advertisement -
- Advertisement -

ಮಂಗಳೂರು:  ಮೇ 6 ರಿಂದ ಕರಾವಳಿ ಪ್ರದೇಶದಲ್ಲಿ  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ

ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!