Thursday, June 4, 2026
Homeತಾಜಾ ಸುದ್ದಿಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಅವಘಡ; ಸಾವಿನ ದವಡೆಯಿಂದ ಪ್ರಯಾಣಿಕರನ್ನು ರಕ್ಷಿಸಿದ ಚಾಲಕ

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಅವಘಡ; ಸಾವಿನ ದವಡೆಯಿಂದ ಪ್ರಯಾಣಿಕರನ್ನು ರಕ್ಷಿಸಿದ ಚಾಲಕ

- Advertisement -
- Advertisement -

ಹಾವೇರಿ: ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ  ಬೆಂಗಳೂರಿನಿಂದ ಗದಗ ನಗರಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕ ಬೆಂಕಿ ತಗುಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ. 

ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು.  ಈ ಸಂದರ್ಭದಲ್ಲಿ ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು, ಚಾಲಕನ ಸಮಪ್ರಜ್ಜೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.     

ಈ ವೇಳೆಯಲ್ಲಿ ಬಸ್ ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದು, ನಂತರದಲ್ಲಿ . ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಈ ಬಗ್ಗೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!