Saturday, June 6, 2026
Homeತಾಜಾ ಸುದ್ದಿಕೇರಳ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ 

ಕೇರಳ ವಿಧಾನಸಭಾ ಚುನಾವಣೆ ಬೆನ್ನಲ್ಲೇ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ 

- Advertisement -
- Advertisement -

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎಫ್ ಸರ್ಕಾರ ಸೋತಿರುವ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಜಯ ದಾಖಲಿಸಿದ್ದು, ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಆಡಳಿತಕ್ಕೆ ಅಂತ್ಯ ಹಾಡಿದೆ. ಇದೀಗ ಯುಡಿಎಫ್ 10 ವರ್ಷದ ಬಳಿಕ ಮತ್ತೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಇನ್ನು ಈ ಹಿನ್ನೆಲೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ತಮ್ಮ ರಾಜೀನಾಮೆ ಪತ್ರವನ್ನು ಲೋಕಭವನಕ್ಕೆ ಕಳುಹಿಸಿದ್ದು, ಪಿಣರಾಯಿ ವಿಜಯನ್ ಅವರ ರಾಜೀನಾಮೆಯನ್ನು ರಾಜ್ಯಪಾಲ ರಾಜೇಂದ್ರ ಆರ್ಲೇಕರ್ ಅಂಗೀಕರಿಸಿದ್ದಾರೆ. ರಾಜ್ಯಪಾಲರು ಸಿಎಂ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಮುಂದಿನ ಸರ್ಕಾರ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ಸ್ವೀಕರಿಸುವವರೆಗೆ ಸಿಎಂ ಆಗಿ ಮುಂದುವರಿಯಲು ಪಿಣರಾಯಿ ವಿಜಯನ್‌ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

- Advertisement -

Latest News

error: Content is protected !!