Thursday, June 4, 2026
HomeUncategorizedಪುತ್ತೂರು: ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

ಪುತ್ತೂರು: ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

- Advertisement -
- Advertisement -

ಪುತ್ತೂರು: ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ಸವಣೂರು ಸಮೀಪದ ಚಾಪಳ್ಳ ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಘಟನೆಯಲ್ಲಿ ಸಹಸವಾರ ಸೇರಿದಂತೆ ಒಟ್ಟು ಮೂವರು ಗಾಯಗೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಗೊಳ್ತಮಜಲು ನಿವಾಸಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಸಹಸವಾರನೊಂದಿಗೆ ಕಡಬ ತಾಲೂಕಿನ ಆಲಂಕಾರಿಗೆ ಕೆಲಸದ ನಿಮಿತ್ತ ತೆರಳಿ ವಾಪಸ್ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಸಂಜೆ ಸುಮಾರು 5 ಗಂಟೆಯ ವೇಳೆ ಚಾಪಳ್ಳ ತಿರುವಿನಲ್ಲಿ ಸ್ಕೂಟರ್ ಚಲಿಸುತ್ತಿದ್ದಾಗ, ಎದುರಿನಿಂದ ಮುಗೆರೋಡಿ ಕನ್ಸ್ಟ್ರಕ್ಷನ್‌ಗೆ ಸೇರಿದ ನೀರಿನ ಟ್ಯಾಂಕರ್ ಬಂದಿದೆ. ಬೈ ಕ್ ಗೆ ಡಿಕ್ಕಿ ತಪ್ಪಿಸಲು ಟ್ಯಾಂಕರ್ ಚಾಲಕ ವಾಹನವನ್ನು ಎಡಕ್ಕೆ ತಿರುಗಿಸಿದಾಗ, ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಬದಿಯ ಕಂದಕಕ್ಕೆ ಉರುಳಿದೆ. ದುರದೃಷ್ಟವಶಾತ್, ಈ ವೇಳೆ ಸ್ಕೂಟರ್ ಟ್ಯಾಂಕರ್‌ನ ಚಕ್ರದ ಅಡಿಗೆ ಸಿಲುಕಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಅಪಘಾತವನ್ನು ಕಂಡು ಗಾಬರಿಯಿಂದ ಬ್ರೇಕ್ ಹಾಕಿದ ಮತ್ತೊಂದು ಬೈಕ್ ಕೂಡ ಸ್ಕಿಡ್ ಆಗಿದ್ದು, ಅದರಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದ ತೀವ್ರತೆಗೆ ಟ್ಯಾಂಕರ್ 90 ಡಿಗ್ರಿ ತಿರುಗಿ ಕಂದಕಕ್ಕೆ ಉರುಳಿದ್ದು, ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -

Latest News

error: Content is protected !!