Thursday, June 4, 2026
Homeಕರಾವಳಿಉಡುಪಿವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ; ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಆಕ್ರೋಶ

ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ; ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಆಕ್ರೋಶ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ವತಿಯಿಂದ ಬಾರ್‌ಗಳಿಗೆ ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಯ ವನ್ನು ಖಂಡಿಸಿ ಉಡುಪಿ ಕರಾವಳಿ ಬೈಪಾಸ್‌ನ ಶಾರದಾ ಹೋಟೆಲ್‌ನಲ್ಲಿ ಸಭೆಯನ್ನು ನಡೆಸಲಾಯಿತು. ‌

ಈ ಸಂದರ್ಭದಲ್ಲಿ ಜಿಲ್ಲಾ ಉಡುಪಿ ಜಿಲ್ಲೆಯ ಗ್ಯಾಸ್ ವಿತರಕ ಏಜೆನ್ಸಿಗಳ ಗ್ಯಾಸ್ ಸರಬರಾಜು ಬಗ್ಗೆ ಅಡಿಟ್ ಆಗಬೇಕು ಎಂದು ಉಡುಪಿ ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಬಿ.ಗೋವಿಂದ ರಾಜ್ ಹೆಗ್ಡೆ ಆಗ್ರಹಿಸಿದರು.

ಮಧ್ಯಪ್ರಾಚ್ಯದ ಯುದ್ಧದ ನೆಪವೊಡ್ಡಿ ಕಳೆದ ಎರಡು ತಿಂಗಳಿನಿಂದ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಅಡುಗೆ ಅನಿಲ (Gas) ಪೂರೈಕೆಯಾಗುತ್ತಿಲ್ಲ. ಕಾಳಸಂತೆಯಲ್ಲಿ ಮತ್ತು ಕೇಟರಿಂಗ್‌ನವರಿಗೆ ಸುಲಭವಾಗಿ ಗ್ಯಾಸ್ ಸಿಗುತ್ತಿದ್ದರೂ, ಸರ್ಕಾರಕ್ಕೆ ಜಿಎಸ್‌ಟಿ ಹಾಗೂ ಅಬಕಾರಿ ತೆರಿಗೆ ಪಾವತಿಸುವ ನಮಗೆ ಮಾತ್ರ ಪೂರೈಕೆ ಸ್ಥಗಿತಗೊಂಡಿದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಇಲ್ಲದ ಗ್ಯಾಸ್ ಸಮಸ್ಯೆ, ಹೋಟೆಲ್ ಉದ್ಯಮಕ್ಕೆ ಮಾತ್ರವೇಕೆ?” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಜಿಲ್ಲಾಧಿಕಾರಿಗಳು ಏಜೆನ್ಸಿಗಳ ಗ್ಯಾಸ್ ಸರಬರಾಜು ಮತ್ತು ವಿತರಣೆಯ ಬಗ್ಗೆ ಅಡಿಟ್ ಮಾಡಿ ವಾಸ್ತವಾಂಶವನ್ನು ಸಮಾಜದ ಮುಂದಿಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಲಾಗುವುದು. ನಮ್ಮ ಮನವಿಗೆ ಸ್ಪಂದನೆ ಸಿಗದಿದ್ದರೆ ಮುಂದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಉಡುಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಅಧ್ಯಕ್ಷ ರೋಹಿತ್ ಕುಮಾರ್ ಶೆಟ್ಟಿ, ಸಜ್ಜನ್ ಹೆಗ್ಡೆ, ಹಂಸರಾಜ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!