ಕಡಬ: ಮಹಿಳೆಯರು ಮತ್ತು ಮಕ್ಕಳನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆಂದು ಆರೋಪದಡಿ ಮನೆಯೊಂದರ ಮೇಲೆ ಕಡಬ ಪೊಲೀಸರು ದಾಳಿ ಮಾಡಿರುವ ಘಟನೆ ಐತ್ತೂರು ಗ್ರಾಮದಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಮನೆಯೊಂದರಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆಂದು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು ತಡರಾತ್ರಿ ಸ್ಥಳಕ್ಕೆ ಧಾವಿಸಿದ್ದಾರೆ. ಮನೆಯಲ್ಲಿ ಬೆಂಗಳೂರು ಮೂಲದ ಸುಮಾರು 10ಕ್ಕೂ ಹೆಚ್ಚು ಮಂದಿ ಪುರುಷರು, ಮಹಿಳೆಯರು ಹಾಗೂ ಮಕ್ಕಳಿದ್ದರು ಎಂದು ತಿಳಿದುಬಂದಿದೆ
ದಾಳಿ ನಡೆಸಿದ ಸಮಯದಲ್ಲಿ ರಾತ್ರಿಯಾಗಿದ್ದರಿಂದ, ನಿಯಮದಂತೆ ಪೊಲೀಸರು ಮನೆಯೊಳಗೆ ಪ್ರವೇಶಿಸದೆ ಹೊರಭಾಗದಲ್ಲೇ ಬಿಗಿ ಕಾವಲು ನಡೆಸಿದರು. ಮುಂಜಾನೆ ವೇಳೆ ಮನೆಯಲ್ಲಿದ್ದವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನಿಂದ ಇಲ್ಲಿಗೆ ಬಂದ ಉದ್ದೇಶವೇನು ಮತ್ತು ಅಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.


