Thursday, June 4, 2026
Homeಕರಾವಳಿಮಂಗಳೂರುಮಡಿಕೇರಿ: ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ: 20 ಪ್ರಯಾಣಿಕರ ಜೀವ ಉಳಿಸಿ ತಾನು ಉಸಿರು ಚೆಲ್ಲಿದ...

ಮಡಿಕೇರಿ: ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತ: 20 ಪ್ರಯಾಣಿಕರ ಜೀವ ಉಳಿಸಿ ತಾನು ಉಸಿರು ಚೆಲ್ಲಿದ ಬಸ್ ಡ್ರೈವರ್

- Advertisement -
- Advertisement -

ಮಡಿಕೇರಿ: ಚಲಿಸುತ್ತಿದ್ದ ಬಸ್‌ನಲ್ಲೇ ಚಾಲಕನಿಗೆ ಹೃದಯಾಘಾತವಾಗಿ 20 ಪ್ರಯಾಣಿಕರ ಜೀವ ಉಳಿಸಿ ಬಸ್ ಡ್ರೈವರ್ ತಾನು ಉಸಿರು ಚೆಲ್ಲಿದ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಬೆಂಗಳೂರು ಮೂಲದ ಶಿವಕುಮಾರ್ (50) ಮೃತ ಚಾಲಕ.

ಮಡಿಕೇರಿಯಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಇಂದು ಮುಂಜಾನೆ 4:45ರ ಸುಮಾರಿಗೆ ತಾಳತ್ತಮನೆ ತಲುಪಿದಾಗ ಈ ಘಟನೆ ಸಂಭವಿಸಿದೆ. ಚಾಲನೆ ಮಾಡುತ್ತಿದ್ದಾಗಲೇ ಶಿವಕುಮಾರ್ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆಯ ಬಲಬದಿಯ ದರೆಗೆ (ಗುಡ್ಡದ ಅಂಚು) ಢಿಕ್ಕಿ ಹೊಡೆದು ವಾಲಿ ನಿಂತಿದೆ.

ಬಸ್ ವೇಗವಾಗಿ ಚಲಿಸುತ್ತಿದ್ದರೂ ದೊಡ್ಡ ಮಟ್ಟದ ಅನಾಹುತ ಸಂಭವಿಸದೆ, ದರೆಗೆ ತಾಗಿ ನಿಂತಿದ್ದರಿಂದ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿದ್ದಾರೆ. ಘಟನೆ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಶಿವಕುಮಾರ್ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!