Friday, June 26, 2026
Homeಕರಾವಳಿಮಂಗಳೂರುಬಂಟ್ವಾಳ: ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು;  ಪ್ರಕರಣ ದಾಖಲು

ಬಂಟ್ವಾಳ: ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು;  ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ ಪ್ರಶಾಂತ ಶೆಟ್ಟಿ (47) ರವರಿಗೆ ದಿನಾಂಕ: 09-05-2026 ರಂದು ಬೆಳಿಗ್ಗೆ, ಬಂಟ್ವಾಳ ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರ ಎಂಬಲ್ಲಿ ಅಟೋರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇಡಲಾಗಿದೆ ಎಂಬುದಾಗಿ ಮಾಹಿತಿ ಬಂದಿತ್ತು. ಅದರಂತೆ  ಕಛೇರಿ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ರಾಮಕೃಷ್ಣ ರವರು ಹಾಗೂ ಸಿಬ್ಬಂದಿಯೊಂದಿಗೆ, ಮಾಹಿತಿ ಬಂದ ಸ್ಥಳಕ್ಕೆ ತೆರಳಿದಾಗ, ಮನೆಯೊಂದರ ಅಂಗಳದಲ್ಲಿ ಕೆಎ-70-ಎ-2034ನೇ ಅಟೋರಿಕ್ಷಾದಲ್ಲಿ 15 ಚೀಲ ಪಡಿತರ ಅಕ್ಕಿಯನ್ನು ತುಂಬಿಸಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಸ್ಥಳದಲ್ಲಿದ್ದ ಆರೋಪಿತ ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್‌ (40)  ಎಂಬಾತನಲ್ಲಿ ವಿಚಾರಿಸಿದಾಗ, ತಾನೇ ಆ ಅಕ್ಕಿ ಮೂಟೆಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟುಕೊಂಡಿರುವುದಾಗಿ ತಿಳಿಸಿದ್ದು, ಸದ್ರಿ ಅಕ್ಕಿ ಮೂಟೆಗಳನ್ನು ಪರಿಶೀಲಿಸಲಾಗಿ, 15 ಪ್ಲಾಸ್ಟಿಕ್‌ ಚೀಲಗಳಲ್ಲಿ ಒಟ್ಟು 679.38 ಕೆಜಿ ತೂಕದ ಪಡಿತರ ಅಕ್ಕಿ (ಅಂದಾಜು ಮೌಲ್ಯ 23,098/-) ಗಳಾಗಿರುತ್ತದೆ. ಆ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026, ಕಲಂ: 3 ಮತ್ತು 7 ಅವಶ್ಯಕ ವಸ್ತುಗಳ ಕಾಯ್ದೆ 1955  ಮತ್ತು ಕಲಂ: 18 ಸಾರ್ವಜನಿಕ ವಿತರಣಾ ಪದ್ದತಿ ಸಾರ್ವಜನಿಕ ನಿಯಂತ್ರಣ ಆದೇಶ 2016 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!