Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿ ಸಾವು

ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿ ಸಾವು

- Advertisement -
- Advertisement -

ಬೆಳ್ತಂಗಡಿ : ಒಂದಲ್ಲ ಒಂದು ಸಮಸ್ಯೆಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿರ್ಲಕ್ಷ್ಯ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇದೀಗ ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಬೆಳ್ತಂಗಡಿ ತಾಲೂಕು ಸರ್ವಜನಿಕ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಪೆಲತ್ತಾಜೆ ನಿವಾಸಿ ಅಚ್ಚುತ್ತ (42) ಎಂಬವರು ಹೊಟ್ಟೆನೋವು ಎಂದು ಮೇ.10 ರಂದು ಮಧ್ಯಾಹ್ನ ದಾಖಲಾಗಿದ್ದರು.‌ ಇವರು ಮೇ.11 ರಂದು ಬೆಳಗ್ಗೆ 5 ಗಂಟೆಗೆ ಸುಮಾರಿಗೆ ಆಸ್ಪತ್ರೆಯಿಂದ ಯಾರಿಗೂ ಹೇಳದೆ ಹೊರಗಡೆ ಹೋಗುವಾಗ ಹಿಂಭಾಗದ ಡಯಾಲಿಸಿಸ್ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಈ ಘಟನೆ ಆಸ್ಪತ್ರೆಯ ವೈದ್ಯರ‌ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಡಿ ಗ್ರೂಪ್ ನೌಕರರು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಚಿಕಿತ್ಸೆಯಲ್ಲಿದ್ದ ರೋಗಿಯೊಬ್ಬರು ಹೊರ ಹೋಗುವಂತೆ ಮಾಡಿ ಸಾವಿಗೆ ಕಾರಣ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಮೃತ ವ್ಯಕ್ತಿಯ ಕುಟುಂಬ ಬಡತನದಲ್ಲಿದ್ದು ಪತ್ನಿ ಕೂಲಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!