Monday, June 8, 2026
Homeಕರಾವಳಿಮಂಗಳೂರುಮಂಗಳೂರು; ಮೊಬೈಲ್ ಅಂಗಡಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ 6 ವರ್ಷಗಳಿಂದ ತಲೆ...

ಮಂಗಳೂರು; ಮೊಬೈಲ್ ಅಂಗಡಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ

- Advertisement -
- Advertisement -

 ಮಂಗಳೂರು; ಮೊಬೈಲ್ ಅಂಗಡಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಕಳ್ಳತನ ಪ್ರಕರಣದಲ್ಲಿ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ರಾಜ್ಯದ ಕಾಚಾರ್  ಜಿಲ್ಲೆಯ ಪಾರೂಲ್ ಹುಸೈನ್ ಲಸ್ಕರ್ ಯಾನೆ ಪಾರೂಲ್(34) ಬಂಧಿತ ಆರೋಪಿ.

ಆರೋಪಿ 2018 ರಲ್ಲಿ ಮಂಗಳೂರು ತಾಲೂಕು ಬೈಕಂಪಾಡಿ ಗ್ರಾಮದ ಕುಡುಂಬೂರು ಎಂಬಲ್ಲಿರುವ  ಪೂಜಾ ಮೊಬೈಲ್ಸ್ ಎಂಬ ಮೊಬೈಲ್ ಅಂಗಡಿಯಲ್ಲಿ ಸುಮಾರು  2,17,740/- ಮೌಲ್ಯದ ಮೊಬೈಲ್ ಫೋನ್, ಅದರ ಬಿಡಿಭಾಗ, ಸಿಸಿಟಿವಿ ಡಿವಿಆರ್ ಹಾಗೂ 2,100 ನಗದು ಹಣವನ್ನು ಕಳವು ಮಾಡಿ,  ರೂ. 10,000 ಮೌಲ್ಯದ 02 ಕಂಪ್ಯೂಟರ್ ಮೊನಿಟರನ್ನು ಒಡೆದು  ನಷ್ಟವುಂಟು ಮಾಡಿದ್ದ. ಈ ಬಗ್ಗೆ  ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ  ಅರೆಸ್ಟ್ ಆಗಿದ್ದ ಲಸ್ಕರ್  6 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಹೀಗಾಗಿ ನ್ಯಾಯಾಲಯವು ಆರೋಪಿ ಮೇಲೆ ಬಂಧನಕ್ಕೆ ವಾರಂಟ್ ನ್ನು ಹೊರಡಿಸಿತ್ತು. ಅದರಂತೆ ರೋಪಿಯನ್ನು  ಕೇರಳ ರಾಜ್ಯದ ಮಂಜೇಶ್ವರದ ಬಳಿ ಮೇಲಾಧಿಕಾರಿಗಳ ನಿರ್ದೇಶನದಂತೆ, ಪೊಲೀಸ್ ನಿರೀಕ್ಷಕರಾದ  ಮೊಹಮ್ಮದ್ ಸಲೀಂ ಅಬ್ಬಾಸ್ ರವರ ಮಾರ್ಗದರ್ಶನದಲ್ಲಿ,  ಠಾಣಾ ಸಿ ಹೆಚ್ ಸಿ ಗಳಾದ ನವೀನ ಚಂದ್ರ, ಸಯ್ಯದ್ ಇಂತಿಯಾಜ್, ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್ ರವರುಗಳು ಈ ದಿನ ದಿನಾಂಕ:11.05.2026 ರಂದು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Latest News

error: Content is protected !!