Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಭೇಟಿ

- Advertisement -
- Advertisement -

ಬೆಳ್ತಂಗಡಿ: ರಾಜ್ಯದಲ್ಲಿ ೨೭ ಲಕ್ಷ ಕೊಳವೆ ಬಾವಿಗಳಿವೆ. ನಮ್ಮ ಸರಕಾರ ಕಳೆದ ಎರಡು ವರ್ಷದಲ್ಲಿ ಪಕ್ಷತೀತವಾಗಿ ಎಸ್‌ಸಿ ಮತ್ತು ಎಸ್ಟಿ ಸಮುದಾಯಗಳಿಗೆ ೧೩ ಸಾವಿರ ಕೊಳವೆ ಬಾವಿಯನ್ನು ನೀಡಲಾಗಿದೆ.

ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಮತ್ತು ಸುಸ್ಥಿರ ನಿರ್ವಹಣೆಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಂತರ್ಜಲ ಪುನಶ್ಚೇತನಗೊಳಿಸುತ್ತಿದೆ ಹಾಗಾಗಿ ಅಂತರ್ಜಲ ಸಮೃದ್ಧಿ ನಮ್ಮೆಲ್ಲರ ಜವಬ್ಧಾರಿಯಾಗಬೇಕು. ಕಿಂಡಿ ಅಣೆಕಟ್ಟು, ತಡೆಗೋಡೆಗಳ ನಿರ್ಮಾಣಕ್ಕೆ ಸರಕಾರ ಪ್ರಯತ್ನಿಸುವುದಾಗಿ ಎಂದು ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವಾರದ ಎನ್.ಎಸ್. ಭೋಸರಾಜು ಹೇಳಿದರು.

ಅವರು ಮೇ.೧೨ ರಂದು ಮಂಗಳವಾರ ಬೆಳ್ತಂಗಡಿ ಪ್ರವಾಸ ಕೈಗೊಂಡಿದ್ದ ವೇಳೆ ಸಂತೆಕಟ್ಟೆಯಲ್ಲಿರುವ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮಾತನಾಡಿ ರಾಜ್ಯದ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿದ ನಾಯಕರು ಬೋಸರಾಜುರು. ತಾಲೂಕಿನಲ್ಲಿ ಅಧಿಕ ಮಳೆ ಸುರಿದರು ಬೇಸಿಗೆಯಲ್ಲಿ ಜಲಕ್ಷಾಮದ ಭೀತಿ ಎದುರಾಗುತ್ತದೆ ಹಾಗಾಗಿ ಅಂತರ್ಜಲ ವೃದ್ಧಿಗೆ ಕಿಂಡಿ ಅಣೆಕಟ್ಟುಗಳ ನಿರ್ಮಾಣದ ಅಗತ್ಯತೆಯಿದೆ. ಅಲ್ಲದೇ ವಿಪರೀತ ಮಳೆಯಿಂದ ನೇರೆ ಭೀತಿ ಉಂಟಾಗುತ್ತದೆ ಹಾಗಾಗಿ ನದಿ ಸಮೀಪವಿರುವ ದೇಗುಲಗಳ ಬಳಿ, ಮಸೀದಿ ಸೇರಿದ್ದಂತೆ ಅಲ್ಲಲ್ಲಿ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು
ಎಂದು ಸಚಿವರಲ್ಲಿ ಮನವಿ ಸಲ್ಲಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪ್ರವೀಣ್ ಫೆರ್ನಾಂಡಿಸ್ ಹಳ್ಳಿ ಮನೆ ಅಝರ್, ಸಹಿತ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಎಂ. ನಾಗೇಶ್ ಕುಮಾರ್ ಗೌಡ ಸ್ವಾಗತಿಸಿ ನಿರೂಪಿಸಿ, ದಯಾನಂದ ಬೆಳಾಲು ವಂದಿಸಿದರು. ಈ ವೇಳೆ ಸಚಿವರನ್ನು ಸನ್ಮಾನಿಸಲಾಯಿತು. ತಾಲೂಕು ಗ್ರಾಮ, ಬೂತ್ ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!