- Advertisement -
![]()
- Advertisement -
ಕೋಲ್ಕತ್ತಾ: ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಈಗ ಒಂದು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭವಾನಿಪುರ ಮತ್ತು ನಂದಿಗ್ರಾಮ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಸುವೇಂದು ಅಧಿಕಾರಿ ನಂದಿಗ್ರಾಮ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಭವಾನಿಪುರ ಕ್ಷೇತ್ರದಲ್ಲಿ ಸುವೇಂದು ಅಧಿಕಾರಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ್ದರು. ರಾಜೀನಾಮೆಯಿಂದ ತೆರವಾಗಿರುವ ನಂದಿಗ್ರಾಮ ಕ್ಷೇತ್ರಕ್ಕೆ ಆರು ತಿಂಗಳೊಳಗಾಗಿ ಉಪಚುನಾವಣೆ ನಡೆಯಲಿದೆ.
ಇದೇ ವೇಳೆ ತಮಿಳುನಾಡಿನಲ್ಲಿ ಕೂಡಾ ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ಮುಖ್ಯಮಂತ್ರಿ ಜೋಸೆಫ್ ವಿಜಯ್ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ತಿರುಚ್ಚಿ ಪೂರ್ವ ಮತ್ತು ಪೆರಂಬೂರು ಕ್ಷೇತ್ರಗಳಿಂದ ಗೆದ್ದಿರುವ ವಿಜಯ್, ತಿರುಚ್ಚಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
- Advertisement -


