Wednesday, June 24, 2026
Homeತಾಜಾ ಸುದ್ದಿಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಮಾತ್ರ ಅವಕಾಶ, ಕೇಸರಿ ಶಾಲಿಗೆ ಇಲ್ಲ: ಸಿಎಂ ಸಿದ್ದರಾಮಯ್ಯ

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಮಾತ್ರ ಅವಕಾಶ, ಕೇಸರಿ ಶಾಲಿಗೆ ಇಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಶಾಲಾ-ಕಾಲೇಜುಗಳಲ್ಲಿ ಸಾಂಪ್ರದಾಯಿಕವಾಗಿ ಧರಿಸುವ ಜನಿವಾರ, ಹಿಜಾಬ್, ಉಡುದಾರ ಮತ್ತು ರುದ್ರಾಕ್ಷಿ ಧರಿಸಲು ಅವಕಾಶವಿದೆ. ಆದರೆ, ಹೊಸದಾಗಿ ಕೇಸರಿ ಶಾಲು ಧರಿಸಲು ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಅವರು ಈ ಬಗ್ಗೆ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಡೀಸೆಲ್ ಬಳಕೆ ಕಡಿಮೆ ಮಾಡಲು ಪ್ರಧಾನಿ ಮೋದಿ ಬೆಂಗಾವಲು ಪಡೆ ಕಡಿತಗೊಳಿಸಿರುವುದು ಕೇವಲ ತಾತ್ಕಾಲಿಕ ಕ್ರಮ. ಇದು ಸರಿಯಾದ ದಾರಿಯಲ್ಲ, ಬದಲಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳುವುದು ಸೂಕ್ತ ಎಂದರು.

ರಾಜ್ಯ ಸಚಿವ ಸಂಪುಟ ಪುನರ್ ರಚಿಸುವ ಉದ್ದೇಶವಿದೆ. ಹೈಕಮಾಂಡ್ ಸೂಚನೆ ನೀಡಿದಾಗ ದೆಹಲಿಗೆ ತೆರಳಿ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.

ಕೇಂದ್ರ ಸರ್ಕಾರ ‘ನೀಟ್’ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಕೇಂದ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

Latest News

error: Content is protected !!