Friday, June 5, 2026
Homeತಾಜಾ ಸುದ್ದಿಬಿಜೆಪಿ ಯುವ ಮೋರ್ಚಾದಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ

ಬಿಜೆಪಿ ಯುವ ಮೋರ್ಚಾದಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ

- Advertisement -
- Advertisement -

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ಯುವ ಮೋರ್ಚಾ, ಇದರ ವಿರುದ್ಧ ಪ್ರತಿಭಟನೆಯ ಹಾದಿ ಹಿಡಿದಿದೆ.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದ ಅವರು, ನಗರದ ನರ್ಮ ಬಸ್‌ಗಳ ಸಂಖ್ಯೆಯನ್ನು ಕಡಿತಗೊಳಿಸಿ ಸಾರ್ವಜನಿಕರಿಗೆ ತೊಂದರೆ ನೀಡಿರುವುದು, ಜಿಲ್ಲಾ ಆಸ್ಪತ್ರೆಯ ಕಾಮಗಾರಿ ವಿಳಂಬ ಹಾಗೂ ಉಡುಪಿ ಪರ್ಯಾಯಕ್ಕೆ ಘೋಷಿಸಿದ ಅನುದಾನ ನೀಡದೆ ಹಿಂದೂ ಸಮಾಜಕ್ಕೆ ಅನ್ಯಾಯ ಮಾಡಿರುವುದನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

- Advertisement -

Latest News

error: Content is protected !!