ಮಂಗಳೂರು: ಗಾಂಜಾ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಮಂಗಳೂರು ನಗರದ ಕಾವೂರು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ನಿವಾಸಿ ಇರ್ಷಾದ್ @ಇರ್ಷಾ (26) ಬಂಧಿತ ಆರೋಪಿ.
ದಿನಾಂಕ:13-05-2026 ರಂದು ಕಾವೂರು ಠಾಣಾ ವ್ಯಾಪ್ತಿಯ ಮೇರಿಹಿಲ್ ಹ್ಯಾಲಿಪ್ಯಾಡ್ ಮೈದಾನದ ಬಳಿ ಮೇರಿಹಿಲ್ ಕಡೆಗೆ ಹೋಗುವ ಸಾರ್ವಜನಿಕ ರಸ್ತೆಯ ಎಡ ಬದಿಯಲ್ಲಿ ಗಾಂಜಾ ಮಾದಕ ವಸ್ತುವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿ ಇರ್ಷಾದ್ ನನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ ಸುಮಾರು 3 ಕೆಜಿ 138 ಗ್ರಾಮ್ ತೂಕದ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್, ಸ್ಕೂಟರ್ ಮತ್ತು ಇತರ ಸೊತ್ತುಗಳನ್ನು ಕಾವೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ದ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ: 74/2026 ಕಲಂ: 8(c), 20(b)(ii)(B) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಪಣಂಬೂರು ACP ತಂಡ ಹಾಗೂ ಕಾವೂರು ಠಾಣೆಯ ತಂಡ ದಿಂದ ಕಾರ್ಯಾಚರಣೆ ನಡೆಸಲಾಗಿದೆ.
ಆರೋಪಿತನಮೇಲೆ ಈ ಕೆಳಗಿನಂತೆ ಪ್ರಕರಣಗಳು ದಾಖಲಾಗಿರುತ್ತದೆ
1) ಉಳ್ಳಾಲ ಪೊಲೀಸ್ ಠಾಣಾ ಅ. ಕ್ರ 106/2019 ಕಲಂ: 307 ಮತ್ತು Arms Act.
2) ಮಂಗಳೂರು CSP PS CRIME NO-06/2024 8 (c),20(b) NDPS Act.


