Saturday, June 6, 2026
Homeತಾಜಾ ಸುದ್ದಿನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮದುವೆ ಮಂಟಪದಲ್ಲೇ ವಧು-ವರರ ಪ್ರತಿಭಟನೆ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮದುವೆ ಮಂಟಪದಲ್ಲೇ ವಧು-ವರರ ಪ್ರತಿಭಟನೆ

- Advertisement -
- Advertisement -

ಚಾಮರಾಜನಗರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮದುವೆ ಮಂಟಪದಲ್ಲೂ ಪ್ರತಿಭಟನೆ ನಡೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಚಾಮರಾಜನಗರ ತಾಲೂಕಿನ‌ ಸಂತೇಮರಹಳ್ಳಿಯ ಮಲ್ಲಿಕಾರ್ಜುನ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ವಿರುದ್ಧ ವಧು ಮತ್ತು ವರ ಪೋಸ್ಟರ್ ಚಳವಳಿ ನಡೆಸಿದ್ದಾರೆ.

ಯುವ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಮೋಹನ್ ಕುಮಾರ್ ಮತ್ತು ನಯನಾ ಎಂಬ ವರ ಹಾಗೂ ವಧು ಪೋಸ್ಟರ್ ಹಿಡಿದು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ವಿವಾಹ ಮಹೋತ್ಸವದ ಆರತಕ್ಷತೆ ವೇಳೆ ಬಿಜೆಪಿ ವಿರುದ್ಧ ಪೋಸ್ಟರ್ ಹಿಡಿದು ವಧು-ವರ ಪ್ರತಿಭಟನೆ ನಡೆಸಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಸಂಸದರ ನಿವಾಸಗಳ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಎನ್ ಟಿಎ ಪರೀಕ್ಷೆಯನ್ನೇ ರದ್ದುಪಡಿಸಿ ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

- Advertisement -

Latest News

error: Content is protected !!