- Advertisement -
![]()
- Advertisement -
ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಒಂದು ವರ್ಷದವರೆಗೆ ಸಾಕ್ಷಿಗಳ ವಿಚಾರಣೆಗೆ ಕಾಲಾವಕಾಶ ನೀಡಿದೆ. 1 ವರ್ಷದಲ್ಲಿ 60 ಸಾಕ್ಷಿಗಳ ವಿಚಾರಣೆ ನಡೆಸಿ ಎಂದು ಹೇಳಿದೆ.ಹಾಗೆಯೇ 1 ವರ್ಷದೊಳಗೆ ವಿಚಾರಣೆ ಮುಗಿಯದಿದ್ದರೇ ಜಾಮೀನು ಅರ್ಜಿ ಪರಿಶೀಲಿಸಲಾಗುವುದು ಎಂದು ಹಾಗಾಗಿ ನಟ ದರ್ಶನ್ ಗೆ ಇನ್ನೂ ಒಂದು ವರ್ಷ ಜೈಲುವಾಸವೇ ಖಾಯಂ ಆಗಿದೆ.
ಜೈಲಿನಲ್ಲಿ ಕನಿಷ್ಠ ಮೂಲಸವಲತ್ತು ನೀಡಿಲ್ಲವೆಂದು ಆರೋಪಿಸಲಾಗಿದೆ. ದರ್ಶನ್ ಗೆ ಎಲ್ಲಾ ಕನಿಷ್ಠ ಮೂಲ ಸವಲತ್ತು ನೀಡಬೇಕು. ಜೈಲು ಕೈಪಿಡಿಯಲ್ಲಿ ನಿಗದಿಪಡಿಸಿರುವ ಸವಲತ್ತು ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
- Advertisement -


