Wednesday, June 24, 2026
Homeಕರಾವಳಿಉಡುಪಿಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ!

ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ!

- Advertisement -
- Advertisement -

ಉಡುಪಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತೀವ್ರ ಪ್ರತಿಭಟನೆ ನಡೆಯಿತು.

ಕೇಂದ್ರ ಸರ್ಕಾರವು ಪತ್ರಿಕೆ ಸೋರಿಕೆ ಮಾಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಮತ್ತು ದೇಶದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ ನಿರ್ಮಿಸಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಡಿಸಿ ಕಚೇರಿ ಸಂಕೀರ್ಣದಲ್ಲಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಗೇಟ್ ಬಳಿಯೇ ತಡೆದು, ವಶಕ್ಕೆ ಪಡೆದರು.

- Advertisement -

Latest News

error: Content is protected !!