Wednesday, June 3, 2026
Homeಕರಾವಳಿಉಡುಪಿಉಡುಪಿ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಆರನೇ ತರಗತಿ ಬಾಲಕ ಸಾವು

ಉಡುಪಿ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಆರನೇ ತರಗತಿ ಬಾಲಕ ಸಾವು

- Advertisement -
- Advertisement -

ಉಡುಪಿ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಆರನೇ ತರಗತಿ ಬಾಲಕ ಸಾವನ್ನಪ್ಪಿರುವ ಘಟನೆ ನೇಜಾರಿನ ಜ್ಯೋತಿನಗರದಲ್ಲಿ ನಡೆದಿದೆ. ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಬ್ದುಲ್ ರೆಹಮಾನ್ (12) ಮೃತಬಾಲಕ.

ಅಬ್ದುಲ್ ರೆಹಮಾನ್ ಮಧ್ಯಾಹ್ನ ಶಾಲೆಯಿಂದ ಪುಸ್ತಕಗಳನ್ನು ಪಡೆದು ತಾಯಿಯೊಂದಿಗೆ ಮನೆಗೆ ಮರಳುತ್ತಿದ್ದಾಗ, ನೇಜಾರು ಆಯಿಷಾ ಮಸೀದಿ ಬಳಿ ಇಳಿದು ರಸ್ತೆ ದಾಟುತ್ತಿದ್ದಾಗ ಸಂತೆಕಟ್ಟೆಯಿಂದ ಕೆಮ್ಮಣ್ಣು ಕಡೆಗೆ ಅತಿವೇಗವಾಗಿ ಬಂದ ಕಾರು ಬಾಲಕನಿಗೆ ಢಿಕ್ಕಿ ಹೊಡೆದಿದೆ. ಕೂಡಲೇ ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲೇ ಆತ ಕೊನೆಯುಸಿರೆಳೆದಿದ್ದನು. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!