Saturday, June 6, 2026
Homeಉತ್ತರ ಕನ್ನಡಜನಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕಿ ಅಪಘಾತಕ್ಕೆ ಬಲಿ

ಜನಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕಿ ಅಪಘಾತಕ್ಕೆ ಬಲಿ

- Advertisement -
- Advertisement -

ಉತ್ತರಕನ್ನಡ: ಜನಗಣತಿ ಕರ್ತವ್ಯದಲ್ಲಿದ್ದ ಶಿಕ್ಷಕಿ ಅಪಘಾತಕ್ಕೆ ಬಲಿಯಾಗಿರುವ ಘಟನೆ ಸಿದ್ದಾಪುರ – ಶಿರಸಿ ಮುಖ್ಯ ರಸ್ತೆಯ ಮಳವತ್ತಿ ಸಮೀಪ ನಡೆದಿದೆ. ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಗಣಪತಿ ಭಟ್ಟ (47) ಮೃತ ಶಿಕ್ಷಕಿ.

ಮೃತರನ್ನು ಪಟ್ಟಣದ ಎಂದು ಗುರುತಿಸಲಾಗಿದೆ. ಪೂರ್ಣಿಮಾ ಅವರು ಜನಗಣತಿ ಮಾಹಿತಿಯನ್ನು ಪಟ್ಟಣ ಪಂಚಾಯಿತಿಗೆ ಸಲ್ಲಿಸಲು ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭಿವಿಸಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪೂರ್ಣಿಮಾ ಅವರನ್ನು ತಕ್ಷಣವೇ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!