Friday, June 5, 2026
Homeಕರಾವಳಿಉಡುಪಿಉಡುಪಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ರೌಡಿಶೀಟರ್ ಬಂಧನ

ಉಡುಪಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ರೌಡಿಶೀಟರ್ ಬಂಧನ

- Advertisement -
- Advertisement -

ಉಡುಪಿ: 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ  ರೌಡಿಶೀಟರ್ ಅನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ತಾಲೂಕು ಮೂಲ್ಕಿ ನಿವಾಸಿ ಅಭಿಜಿತ್ (34) ಬಂಧಿತ ಆರೋಪಿ. ಈತನ ವಿರುದ್ಧ IPC ಕಲಂ 341, 354(A), 354(B) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್ ಉಪಾಧೀಕ್ಷಕರು ಕಾರ್ಕಳ ಉಪವಿಭಾಗ ಹಾಗೂ ಪೊಲೀಸ್ ವೃತ್ತ ನಿರೀಕ್ಷಕರು ಕಾಪು ವೃತ್ತ ಇವರ ಮಾರ್ಗದರ್ಶನದಲ್ಲಿ, ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ (ಕಾ&ಸು) ಹಾಗೂ ಶುಭಕರ ಪಿ.ಎಸ್‌.ಐ (ತನಿಖೆ) ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ ಮೊಹಮ್ಮದ್ ರಫೀಕ್ ಹಾಗೂ ಪಿಸಿ ರಾಘು ಅವರು ಮೇ 15ರಂದು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ

ಆರೋಪಿತ ವಿರುದ್ಧ ಮೈಸೂರು ನರಸಿಂಹರಾಜಪುರ ಹಾಗೂ ಬಜ್ಪೆ ಪೊಲೀಸ್ ಠಾಣೆಗಳಲ್ಲಿ ಸಹ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮೇ 15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮೇ 25ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

- Advertisement -

Latest News

error: Content is protected !!