Saturday, June 6, 2026
Homeಕರಾವಳಿಮಂಗಳೂರುಬಂಟ್ವಾಳ: ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಗರ್ಭಗುಡಿಯ ಪ್ರಾಕಾರಕ್ಕೆ ಸಿಡಿಲು ಬಡಿದು ಕೋಟ್ಯಾಂತರ ರೂ...

ಬಂಟ್ವಾಳ: ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಗರ್ಭಗುಡಿಯ ಪ್ರಾಕಾರಕ್ಕೆ ಸಿಡಿಲು ಬಡಿದು ಕೋಟ್ಯಾಂತರ ರೂ ನಷ್ಟ

- Advertisement -
- Advertisement -

ಬಂಟ್ವಾಳ; ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಪ್ರಾಕಾರಕ್ಕೆ ಸಿಡಿಲು ಬಡಿದು 1 ಕೋಟಿಯಷ್ಟು ರೂಪಾಯಿ ನಷ್ಟ ಸಂಭವಿಸಿದೆ.  

ಸಂಜೆ ಸುಮಾರು 4.30 ರ ವೇಳೆ ಗೆ ಸುರಿದ ಗಾಳಿ ಮಳೆಯ ನಡುವೆ ಸಿಡಿಲು ಬಡಿದಿದೆ. ಸಿಡಿಲಿನ ಬಡಿತಕ್ಕೆ ದೇವಸ್ಥಾನದ ಗರ್ಭ ಗುಡಿಯ ಮೇಲಿನ ಪ್ರಾಕಾರ ದ ಶಿಲಾ ಕಲ್ಲುಗಳು ಛಿದ್ರಗೊಂಡು ನೆಲಕ್ಕಪ್ಪಳಿಸಿದೆ.

ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೆ ದೇವಸ್ಥಾನ ನವೀಕರಣಗೊಂಡು ಬ್ರಹ್ಮಕಲಶೋತ್ಸವ ನಡೆದಿತ್ತು. ಇದೀಗ ದೇವಸ್ಥಾನದ ದೇವರ ಗರ್ಭಗುಡಿಗೆ ಹಾನಿಯಾಗಿದ್ದು,ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ. ಸಿಡಿಲು ಬಡಿದ ಕಾರಣದಿಂದ ಮತ್ತೆ ದೇವರ ಗುಡಿಯ ನವೀಕರಣ ಕಾರ್ಯ ನಡೆಯಬೇಕಿದ್ದು ಮತ್ತೆ ಕೋಟ್ಯಾಂತರ ರೂಪಾಯಿಗಳು ಖರ್ಚು ಇದೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!