- Advertisement -
![]()
- Advertisement -
ಮಂಗಳೂರು : ಭಾರತೀಯ ಯುವ ಕಾಂಗ್ರೆಸ್ ಹದಿನೈದು ಮಂದಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ. ಬೆಳ್ತಂಗಡಿ ತಾಲೂಕಿನ ರಾಜ್ಯ ಸಮಿತಿಯ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಪವನ್ ಸಾಲ್ಯಾನ್ ಕೊಲ್ಲಾಜೆ ಅವರಿಗೂ ಕೂಡ ಅವರಿಗೆ ನೀಡಿದ್ದ ಜವಬ್ದಾರಿಯಿಂದ ಕಿಕ್ ಔಟ್ ಕೊಡಲಾಗಿದೆ.

ಕರ್ತವ್ಯ ಲೋಪ, ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿರುವುದು,ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಕಾರಣದಿಂದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ ಒಟ್ಟು 15 ಮಂದಿ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಭಾರತೀಯ ಯುವ ಕಾಂಗ್ರೆಸ್ ಮೇ.13 ರಂದು ಅಧಿಕೃತ ಆದೇಶವನ್ನು ದೆಹಲಿಯಿಂದ ಹೊರಡಿಸಲಾಗಿದೆ.
- Advertisement -


