Wednesday, June 3, 2026
Homeಕರಾವಳಿಉಡುಪಿಉಡುಪಿ; ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ಮಧ್ಯೆ ಅಪಘಾತ; ಇಬ್ಬರು ಸಾವು

ಉಡುಪಿ; ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ಮಧ್ಯೆ ಅಪಘಾತ; ಇಬ್ಬರು ಸಾವು

- Advertisement -
- Advertisement -

ಉಡುಪಿ; ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ಮಧ್ಯೆ ಅಪಘಾತ ಅಪಘಾತವಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಕೊಲ್ಲೂರು ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಜ್ಯೋತಿ(34), ಆರ್ಯ ಅನೂಪ್ (26)ಮೃತರು. ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಆಯನ್(5), ಅವನಿ(8) ಅರ್ಜುನ್(9), ಮಿನಿ(60), ಅಬೆ(37), ಅನೂಪ್ (37) ಜ್ಯೋತಿ(43), ಜೀಪ್ ಚಾಲಕ ದೇವರಾಜ್ ಗಂಭೀರ ಗಾಯಗೊಂಡವರು.

ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ನಾಗೋಡಿ ಕಡೆಯತ್ತ ಸಾಗುತ್ತಿದ್ದ ಟೆಂಪೋ ಮಧ್ಯೆ ಈ ಅಪಘಾತ ನಡೆದಿದೆ. ಮೃತರು ಹಾಗೂ ಗಾಯಾಳುಗಳು ಕೇರಳ ಮೂಲದವರೆಂದು ಸದ್ಯ ತಿಳಿದುಬಂದಿದೆ.

ಕೊಲ್ಲೂರು ಠಾಣೆ ಪಿಎಸ್‌ಐಗಳಾದ ವಿನಯ್ ಎಂ.ಕೊರ್ಲಹಳ್ಳಿ, ಭೀಮಾಶಂರ್ಕ ಸ್ಥಳಕ್ಕೆ ಹಾಗೂ ಗಾಯಾಳುಗಳಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!