Friday, June 5, 2026
Homeಉತ್ತರ ಕನ್ನಡಬೆಳ್ತಂಗಡಿ : ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಬಳಂಜ ಫಾರ್ಮ್ ನ ಮಾಲಕಿ...

ಬೆಳ್ತಂಗಡಿ : ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಬಳಂಜ ಫಾರ್ಮ್ ನ ಮಾಲಕಿ ಶೈಲಜಾ ಭಟ್ ಸಾವು, ಪತಿ ಅನಿಲ್ ಬಳಂಜ ಅವರಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಅನಿಲ್ ಭಟ್ ಗೆ ಗಾಯವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅನಿಲ್ ಭಟ್ ಮತ್ತು ಪತ್ನಿ  ಶೈಲಜಾ ಅವರು ತಮ್ಮ ಫಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!