Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

- Advertisement -
- Advertisement -

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲಾಯಿಲದ ರಿಜ್ವಾನ್(38) ಎಂಬಾತ ನವಂಬರ್ 2025 ರ ಸಮಯದಲ್ಲಿ ಅತ್ಯಾಚಾರ ಮಾಡಿ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ, ಇದರಿಂದ ಬಾಲಕಿ ಭಯಗೊಂಡು ಯಾರಿಗೂ ವಿಚಾರವನ್ನು ತಿಳಿಸಿರಲಿಲ್ಲ. ಇತ್ತೀಚೆಗೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಬಾಲಕಿ ಮೂರುವರೆ ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿರುವುದಾಗಿ ನೊಂದ ಬಾಲಕಿಯ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮೇ.17 ರಂದು ದೂರು ನೀಡಿದ್ದಾರೆ.ದೂರಿನ ಬಗ್ಗೆ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಲಾಯಿಲದ ರಿಜ್ವಾನ್(38) ಎಂಬಾತನನ್ನು ಮೇ.18 ರಂದು ಸಂಜೆ ಉಜಿರೆಯ ನೀರಚಿಲುಮೆ ಬಳಿ ಬಂಧಿಸಿ ವಿಚಾರಣೆ ನಡೆಸಿ ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಮೇ.19 ರಂದು ಹಾಜರುಪಡಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!