- Advertisement -
![]()
- Advertisement -
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಬಗ್ಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘಸಂಸ್ಥೆಗಳ ಪದಾಧಿಕಾರಿಗಳು ಸ್ಥಳೀಯ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸಾರ್ವಜನಿಕ ಬೇಡಿಕೆಗಳ ಕುರಿತು ಮಾಹಿತಿ ನೀಡಿದರು. ಸಾರ್ವಜನಿಕರು ಹಾಗೂ ವಿವಿಧ ವಲಯಗಳ ಮುಖಂಡರು ಮುಖಾಮುಖಿಯಾಗಿ ತಮ್ಮ ಭಾಗದ ಪ್ರಮುಖ ಸಮಸ್ಯೆಗಳನ್ನು ಸಂಸದರ ಮುಂದಿಟ್ಟರು.
- Advertisement -


