Saturday, June 6, 2026
Homeತಾಜಾ ಸುದ್ದಿಎಬೋಲಾ ವೈರಸ್ ಭೀತಿ: ಕರ್ನಾಟಕದಲ್ಲಿ ತೀವ್ರ ಮುನ್ನೆಚ್ಚರಿಕೆಗೆ ಸೂಚನೆ!

ಎಬೋಲಾ ವೈರಸ್ ಭೀತಿ: ಕರ್ನಾಟಕದಲ್ಲಿ ತೀವ್ರ ಮುನ್ನೆಚ್ಚರಿಕೆಗೆ ಸೂಚನೆ!

- Advertisement -
- Advertisement -

ಆಫ್ರಿಕಾ ಖಂಡದ ಕಾಂಗೋ ಮತ್ತು ಉಗಾಂಡ ದೇಶಗಳಲ್ಲಿ ತೀವ್ರವಾಗಿ ಹರಡುತ್ತಿರುವ ಮಾರಕ ಎಬೋಲಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ, ದೇಶಾದ್ಯಂತ ಹಾಗೂ ಕರ್ನಾಟಕದಲ್ಲಿ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯ ಆರೋಗ್ಯ ಇಲಾಖೆಯು ಸಂಪೂರ್ಣ ಅಲರ್ಟ್ ಆಗಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ. ಸದ್ಯಕ್ಕೆ ನಮ್ಮ ದೇಶದಲ್ಲಿ ಇದುವರೆಗೆ ಎಬೋಲಾದ ಒಂದೇ ಒಂದು ಪ್ರಕರಣವೂ ಪತ್ತೆಯಾಗಿಲ್ಲದಿರುವುದು ಸಮಾಧಾನಕರ ಸಂಗತಿಯಾಗಿದೆ.

ಕೋವಿಡ್‌ನಂತಹ ಸಾಂಕ್ರಾಮಿಕ ರೋಗಗಳನ್ನು ಯಶಸ್ವಿಯಾಗಿ ಎದುರಿಸಿದ ಅನುಭವ ಹೊಂದಿರುವ ಆರೋಗ್ಯ ಇಲಾಖೆಯು ಈಗ ಎಬೋಲಾ ನಿಯಂತ್ರಣಕ್ಕೂ ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಸದ್ಯಕ್ಕೆ ಕೇಂದ್ರದಿಂದ ಯಾವುದೇ ಹೊಸ ಅಥವಾ ಕಠಿಣ ನಿಯಮಗಳು ಬರದಿದ್ದರೂ, ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸುವ ಪ್ರತಿಯೊಂದು ಮಾರ್ಗಸೂಚಿಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!