Sunday, June 7, 2026
Homeಕರಾವಳಿಮಂಗಳೂರುಉಪ್ಪಿನಂಗಡಿ: ಚಾಲಕನ ನಿಯಂತ್ರಣ 70 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು

ಉಪ್ಪಿನಂಗಡಿ: ಚಾಲಕನ ನಿಯಂತ್ರಣ 70 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು

- Advertisement -
- Advertisement -

ಉಪ್ಪಿನಂಗಡಿ: ಚಾಲಕನ ನಿಯಂತ್ರಣ 70 ಅಡಿ ಆಳದ ಕಂದಕಕ್ಕೆ ಕಾರು ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಮೇ 22ರಂದು ಸಂಜೆ ಸಂಭವಿಸಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ಒಳಗಿದ್ದ ಪ್ರಯಾಣಿಕರು ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ, ಕೊಕ್ಕಡ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಹಾಗೂ ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಇವರಿಬ್ಬರೂ ಕೊಕ್ಕಡದ ಪಟ್ಟೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಪಂಜಳ ಎಂಬಲ್ಲಿ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮವಾಗಿ ಕಾರು ರಸ್ತೆ ಬದಿಯಿಂದ ಕೆಳಕ್ಕೆ ಉರುಳಿ, ನದಿ ತೀರದ ಆಳವಾದ ಕಂದಕಕ್ಕೆ ಬಿದ್ದಿದೆ. ಘಟನೆಯ ತೀವ್ರತೆ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!