Wednesday, June 24, 2026
Homeಕರಾವಳಿಮಂಗಳೂರುಮಂಗಳೂರು ರೈಲ್ವೇ ವಿಭಾಗ ಮಾಡುವ ಚಿಂತನೆ ಇದೆ, ಇನ್ನೊಂದು ತಿಂಗಳಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು...

ಮಂಗಳೂರು ರೈಲ್ವೇ ವಿಭಾಗ ಮಾಡುವ ಚಿಂತನೆ ಇದೆ, ಇನ್ನೊಂದು ತಿಂಗಳಲ್ಲಿ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಓಡಾಟ ; ರೈಲ್ವೇ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿಕೆ

- Advertisement -
- Advertisement -

ಮಂಗಳೂರು: ರೈಲ್ವೇ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಇಂದು ಮಂಗಳೂರು ರೈಲ್ವೇ ನಿಲ್ದಾಣದಲ್ಲಿಂದು ಅಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಡಿ ಮರು ಅಭಿವೃದ್ಧಿಗೊಳ್ಳುತ್ತಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು‌.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್‌ ಹೆಚ್.ವಿ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಬಳಿಕ ಮಾತನಾಡಿದ ಸಚಿವ ವಿ. ಸೋಮಣ್ಣ, ಮಂಗಳೂರು ಮೂರು ರೈಲ್ವೇ ವಿಭಾಗಗಳಲ್ಲಿ ಹಂಚಿ ಹೋಗಿದ್ದು, ಮಂಗಳೂರನ್ನು ರೈಲ್ವೇ ವಿಭಾಗ ಮಾಡುವ ನಿಟ್ಟಿನಲ್ಲಿ ಚಿಂತನೆ ಇದೆ ಎಂದು ಹೇಳಿದ್ದಾರೆ.

ಸುಬ್ರಹ್ಮಣ್ಯ – ಸಕಲೇಶಪುರ ನಡುವೆ 55 ಕಿಲೋ ಮೀಟರ್ ರೈಲು ಮಾರ್ಗ ವಿದ್ಯುದೀಕರಣ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳಿನಲ್ಲಿ ಮಂಗಳೂರು – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಾಟ ಆರಂಭವಾಗಲಿದೆ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.

- Advertisement -

Latest News

error: Content is protected !!