Wednesday, June 24, 2026
Homeತಾಜಾ ಸುದ್ದಿಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ;ನೂತನ ನ್ಯಾಯಾಲಯ ಸಂಕೀರ್ಣ...

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ;ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

- Advertisement -
- Advertisement -

ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಆರ್ಥಿಕ ಬಿಡ್ ಗೆ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು ಆ ನಿಟ್ಟಿನಲ್ಲಿ  ವಕೀಲರ ಸಂಘದ ನಿಯೋಗ ಇಂದು ಬೆಂಗಳೂರಿನ ನ್ಯಾಯಗ್ರಾಮದಲ್ಲಿರುವ  ವಸತಿ ಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಚ್ ಟಿ ನರೇಂದ್ರಪ್ರಸಾದ್ ರವರನ್ನು ಬೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದರು.

 ಇದೇ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಮಹಮ್ಮದ್ ನವಾಜ್ ರವರನ್ನು ಭೇಟಿ ಮಾಡಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಿದರು. ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ, ಸಂಘದ ಉಪಾಧ್ಯಕ್ಷ, ಕಟ್ಟಡ ಸಮಿತಿ ಅಧ್ಯಕ್ಷರಾದ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷರಾದ ಶಿವ ಕುಮಾರ್ ಎಸ್ ಎಂ, ಕಟ್ಟಡ ಸಮಿತಿ ಸದಸ್ಯ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ಮತ್ತು ಕಟ್ಟಡ ಸಮಿತಿ ಸದಸ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು.

- Advertisement -

Latest News

error: Content is protected !!