- Advertisement -
![]()
- Advertisement -
ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ನವದೆಹಲಿಗೆ ತೆರಳಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾತ್ರಿ 7 ಗಂಟೆಗೆ ಸಿದ್ಧರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದಾರೆ.
ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮ ಸಂಬಂಧವಾಗಿ ನಾಳೆ ನವದೆಹಲಿಯಲ್ಲಿ ಸಭೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಸಚಿವ ಸಂಪುಟ ಪುನಾರಚನೆ ಬಗ್ಗೆ ಕೂಡಾ ಸಿದ್ಧರಾಮಯ್ಯ ಹೈಕಮಾಂಡ್ ಮುಂದೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ದೆಹಲಿಗೆ ಬರುವಂತೆ ಸೂಚನೆ ಸಿಕ್ಕಿದೆ ಎಂದು ಹೇಳಲಾಗಿದ್ದು, ಅದರೂ ಕೂಡಾ ದೆಹಲಿಗೆ ತೆರಳಲಿದ್ದಾರೆ.
ಸಚಿವ ಸಂಪುಟ ಪುನಾರಚನೆ ಬಗ್ಗೆ ಕೂಡಾ ಚರ್ಚೆ ನಡೆಯುವ ನಿರೀಕ್ಷೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಾಕಾಂಕ್ಷಿಗಳಾಗಿರುವ ಶಾಸಕರು ಕೂಡ ದೆಹಲಿಗೆ ತೆರಳಲು ಸಿದ್ಧರಾಗಿದ್ದಾರೆ.
- Advertisement -


