Tuesday, June 23, 2026
Homeಕರಾವಳಿಕೇಂದ್ರ ಸರ್ಕಾರದ ವಿರುದ್ಧ ಬಂಟ್ವಾಳ ಕಾಂಗ್ರೆಸ್ ಮುಖಂಡರ ಧರಣಿ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಮಾನಾಥ...

ಕೇಂದ್ರ ಸರ್ಕಾರದ ವಿರುದ್ಧ ಬಂಟ್ವಾಳ ಕಾಂಗ್ರೆಸ್ ಮುಖಂಡರ ಧರಣಿ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಮಾನಾಥ ರೈ ಆಗ್ರಹ

- Advertisement -
- Advertisement -

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇಂಧನ ಬೆಲೆ ಏರಿಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಅವರು, ಬಿಜೆಪಿ ಸರ್ಕಾರವು ಬಡವರನ್ನು ಶೋಷಿಸಿ ಶ್ರೀಮಂತರನ್ನು ಬೆಳೆಸುತ್ತಾ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ ಎಂದು ಲೇವಡಿ ಮಾಡಿದರು. ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರಿಗೆ ಆಡಳಿತ ನಡೆಸಲು ಅವಕಾಶ ನೀಡಬೇಕೆಂದು ವಿನಂತಿಸಿದ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಕೆಪಿಸಿಸಿ ವಕ್ತಾರ ಎಂ.ಜಿ.ಹೆಗಡೆ ಮಾತನಾಡಿ, ಮೋದಿ ಸರ್ಕಾರವು ಒಡೆದು ಆಳುವ ನೀತಿ ಹಾಗೂ ಸರ್ವಾಧಿಕಾರಿ ಧೋರಣೆಯ ಮೂಲಕ ಪ್ರಶ್ನೆ ಕೇಳುವವರನ್ನು ಹತ್ತಿಕ್ಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಹಲವು ಗಣ್ಯರು ಸೇರಿದಂತೆ, ಕಾರ್ಯಕರ್ತರು ಕೂಡ ಉಪಸ್ಥಿತರಿದ್ದರು.

- Advertisement -

Latest News

error: Content is protected !!