Friday, June 5, 2026
Homeಕರಾವಳಿಮೇ 28ರಿಂದ 31ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಮಾವು ಮೇಳ

ಮೇ 28ರಿಂದ 31ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಮಾವು ಮೇಳ

- Advertisement -
- Advertisement -

ಮಂಗಳೂರು: ಮೇ 28ರಿಂದ 31ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ರಾಮನಗರ ಜಿಲ್ಲಾ ಮಾವು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ತೋಟಗಾರಿಕಾ ಇಲಾಖೆಯ ಸಹಕಾರದೊಂದಿಗೆ ಮಾವು ಮೇಳ ಆಯೋಜಿಸಲಾಗಿದ್ದು, ಮೇ 28ರಂದು ಪೂರ್ವಾಹ್ನ 11ಕ್ಕೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಈ ಮೇಳದಲ್ಲಿ ಉತ್ತಮ ಗುಣಮಟ್ಟದ ಮಾವಿನ ವಿವಿಧ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಮಲ್ಲಿಕ, ರಸಪುರಿ, ಮಲಗೋವಾ, ಸಿಂಧೂರ, ಕಾಲಪಾಡಿ, ತೋತಾಪುರಿ, ಬೆಂಗನ್ಪಲ್ಲಿ, ಶುಗರ್ ಬೇಬಿ ಇತ್ಯಾದಿ ಮಾವಿನ ಹಣ್ಣುಗಳು ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟಕ್ಕೆ ಲಭ್ಯವಿರುತ್ತವೆ.

ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.ಅತಿಥಿಗಳಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ತೋಟಗಾರಿಕಾ ಇಲಾಖೆಯ ನಿರ್ದೇಶಕ ಇಬ್ರಾಹೀಂ ಮೈಗೂರ, ಜಿಪಂ ಸಿಇಒ ನರ್ವಡೆ ವಿನಾಯಕ ಕರ್ಬಾರಿ, ಮನಪಾ ಆಯುಕ್ತ ರವಿಚಂದ್ರ ನಾಯ್ಕ್, ತೋಟಗಾರಿಕಾ ಇಲಾಖೆಯ ಅಪರ ನಿರ್ದೇಶಕ ಡಾ.ಎಸ್.ನಂದಾ, ದ.ಕ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ವಿಜಯ್ ಕುಮಾರ್ ರೈ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!