Saturday, June 6, 2026
Homeತಾಜಾ ಸುದ್ದಿರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಶಾಸಕ ಆರ್.ವಿ. ದೇಶಪಾಂಡೆ ಸ್ಪಷ್ಟನೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಶಾಸಕ ಆರ್.ವಿ. ದೇಶಪಾಂಡೆ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಥವಾ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಬಹಳ ದಿನಗಳಿಂದ ಚರ್ಚೆಯಲ್ಲಿದ್ದ ವಿಚಾರವನ್ನು ಮಾಜಿ ಸಚಿವ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಅವರು ಸ್ಪಷ್ಟಪಡಿಸಿದ್ದಾರೆ.

ಸಿಎಂ ಮತ್ತು ಡಿಸಿಎಂ ಅವರ ದೆಹಲಿ ಪ್ರವಾಸದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಸಿಎಂ ದೆಹಲಿಗೆ ಭೇಟಿ ನೀಡಿರುವುದು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ, ವಿಧಾನ ಪರಿಷತ್ ಚುನಾವಣೆಯ ಕುರಿತಾದ ಚರ್ಚೆ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ರಾಜ್ಯದ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿ ಮಾಡಲು ಮಾತ್ರ. ಒಟ್ಟಾರೆಯಾಗಿ, ಈ ಪ್ರವಾಸವು ಸರ್ಕಾರ ಮತ್ತು ಪಕ್ಷದ ಕೆಲಸಗಳ ಹಿನ್ನೆಲೆಯಲ್ಲಿ ನಡೆದಿದೆಯೇ ಹೊರತು ನಾಯಕತ್ವ ಬದಲಾವಣೆಗಲ್ಲ ಎಂದು ಅವರು ವಿವರಿಸಿದರು.

- Advertisement -

Latest News

error: Content is protected !!