- Advertisement -
![]()
- Advertisement -
ಇತ್ತೀಚೆಗೆ ಭಾರೀ ಸಂಚಲನವನ್ನು ಮೂಡಿಸಿದ್ದ ಕಾಕ್ರೋಚ್ ಜನತಾ ಪಾರ್ಟಿ (CJP) ಯ ‘X’ (ಟ್ವಿಟರ್) ಖಾತೆಯನ್ನು ತಕ್ಷಣವೇ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಖಾತೆಯಲ್ಲಿನ ಕೆಲವು ಪೋಸ್ಟ್‌ಗಳು ಆಕ್ಷೇಪಾರ್ಹವಾಗಿವೆ ಎಂದು ಅಭಿಪ್ರಾಯಪಟ್ಟಿದೆ.
ಅಭಿಜೀತ್ ಪರ ವಕೀಲ ಅಖಿಲ್ ಸಿಬಲ್ ಅವರು ಕೇವಲ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾತ್ರ ನಿರ್ಬಂಧಿಸಿ, ಖಾತೆಯನ್ನು ಮರುಸ್ಥಾಪಿಸುವಂತೆ ಕೋರಿದರೂ ನ್ಯಾಯಾಲಯ ಯಾವುದೇ ಮಧ್ಯಂತರ ಪರಿಹಾರ ನೀಡಲಿಲ್ಲ. ಈ ವಿಷಯದ ಬಗ್ಗೆ ಸಂಪೂರ್ಣ ಪರಿಶೀಲನೆಯ ಅಗತ್ಯವಿದ್ದು, ಕೇಂದ್ರ ಸರ್ಕಾರ ಮತ್ತು ‘X’ ಸಂಸ್ಥೆಯ ಪ್ರತಿಕ್ರಿಯೆ ಪಡೆದ ನಂತರವೇ ಮುಂದಿನ ಆದೇಶ ನೀಡುವುದಾಗಿ ತಿಳಿಸಿದ ಹೈಕೋರ್ಟ್, ಅವರಿಗೆ ವಿವರವಾದ ಅಫಿಡವಿಟ್ ಸಲ್ಲಿಸಲು ಸೂಚಿಸಿದೆ.
- Advertisement -


