ಸವಣೂರು; ಅಕ್ರಮವಾಗಿ ಗೋ ಹತ್ಯೆ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರಫೀಕ್(37), ಅದ್ರಾಮ ಮಂತೂರು(41) ಮತ್ತು ಅಬ್ದುಲ್ ಖಾದರ್ ಪಣೆಮಜಲು (57) ಬಂಧಿತ ಆರೋಪಿಗಳು.
ದಿನಾಂಕ:29.05.2026ರಂದು ಸಂಜೆ, ಅಕ್ರಮ ಗೋ ಹತ್ಯೆ ನಡೆಯುತ್ತಿರುವ ಬಗ್ಗೆ ಬೆಳ್ಳಾರೆ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂತೋಷ್ ಬಿ ಪಿ ರವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು ಸಿಬ್ಬಂದಿಗಳೊಂದಿಗೆ ಮಾಹಿತಿ ಬಂದ ಸ್ಥಳವಾದ ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ, ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಗೊತ್ತಾಗಿದೆ. ಈ ವೇಳೆ ದಾಳಿ ನಡೆಸಿ ಮೂವರನ್ನು ಹಿಡಿದು ವಿಚಾರಿಸಲಾಗಿ, ಅವರುಗಳು ಕೆ ಎಂಬುದಾಗಿ ತಿಳಿಸಿರುತ್ತಾರೆ. ವಿಚಾರಣೆಯ ವೇಳೆ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಗೋವಧೆ ನಡೆಸಿ ಮಾಂಸ ಮಾಡುತ್ತಿರುವುದು ದೃಢಪಟ್ಟಿದ್ದು, ಸ್ಥಳದಲ್ಲಿದ್ದ ಜಾನುವಾರು ಮಾಂಸ, ಇತರೆ ಸೊತ್ತುಗಳನ್ನು ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 36/2026, ಕಲಂ 4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


