- Advertisement -
![]()
- Advertisement -
ಮಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಬಿ.ಕೆ ಹರಿಪ್ರಸಾದ್ ರಿಗೆ ಸಚಿವ ಸ್ಥಾನ ನೀಡಬೇಕೆಂದು ಅಖಿಲ ಭಾರತ ಬಿಲ್ಲವರ ಸಂಘಟನೆ ಆಗ್ರಹಿಸಿದೆ.
ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತನಂದ ಸ್ವಾಮೀಜಿ ಈ ಬಗ್ಗೆ ಮಾತನಾಡಿ, ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯವನ್ನು ನೀಡಬೇಕು. ಬಿ.ಕೆ.ಹರಿಪ್ರಸಾದ್ ಬಿಲ್ಲವ ಸಮಾಜದ ಅಗ್ರಗಣ್ಯ ನಾಯಕರು, ಹಿರಿಯ ಮುತ್ಸದ್ದಿ ಮತ್ತು ಅನುಭವಿ ರಾಜಕಾರಣಿ. ರಾಜ್ಯಸಭಾ ಸದಸ್ಯರಾಗಿ, ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಸಮರ್ಥವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಅವರಿಗೆ ಮುಂದೆ ರಚನೆಯಾಗುವ ಸಚಿವ ಸಂಪುಟದಲ್ಲಿ ಸಚಿವ ಸ್ಥಾನವನ್ನು ನೀಡಬೇಕೆಂದು ಅಖಿಲ ಭಾರತ ಬಿಲ್ಲವ ಸಮಾಜದ ಒಕ್ಕೊರಲಿನ ಆಗ್ರಹವಾಗಿದೆ ಎಂದು ತಿಳಿಸಿದರು.
- Advertisement -


