Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಓಡಿಲ್ನಾಳದಲ್ಲಿ ಬಾಲಕ ಸುಮಂತ್  ಅನುಮಾನಾಸ್ಪದ ಸಾವು ಪ್ರಕರಣ: ಸುಮಂತ್  ಪೋಷಕರೊಂದಿಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು...

ಬೆಳ್ತಂಗಡಿ; ಓಡಿಲ್ನಾಳದಲ್ಲಿ ಬಾಲಕ ಸುಮಂತ್  ಅನುಮಾನಾಸ್ಪದ ಸಾವು ಪ್ರಕರಣ: ಸುಮಂತ್  ಪೋಷಕರೊಂದಿಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ; ಓಡಿಲ್ನಾಳದಲ್ಲಿ ಬಾಲಕ ಸುಮಂತ್  ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಂತ್  ಪೋಷಕರೊಂದಿಗೆ ಶಾಸಕ ಹರೀಶ್ ಪೂಂಜ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸುಮಂತ್ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಈ ಹಿಂದೆ ವಿಧಾನಮಂಡಲ ಅಧಿವೇಶನದಲ್ಲಿಯೇ ಶಾಸಕ ಹರೀಶ್ ಪೂಂಜ ಪ್ರಸ್ತಾಪಿಸಿದ್ದರು. ಅಲ್ಲದೇ, ಈ ಪ್ರಕರಣದ ಬಗ್ಗೆ ಮಾನ್ಯ ಗೃಹಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದರು. ಆದಾಗ್ಯೂ, ಇಷ್ಟೊಂದು ಸಮಯ ಕಳೆದರೂ ಕುಟುಂಬಕ್ಕೆ ನ್ಯಾಯ ದೊರಕಿಲ್ಲ.

ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕ ಸುಮಂತ್ ಅವರ ಪೋಷಕರೊಂದಿಗೆ ಹಾಗೂ ಕುಟುಂಬದ ಸದಸ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ಪ್ರಕರಣದ ಪ್ರಗತಿ ಹಾಗೂ ಇದುವರೆಗಿನ ತನಿಖೆಯ ಕುರಿತು ಸುದೀರ್ಘವಾಗಿ ಚರ್ಚಿಸಿದ್ದಾರೆ. ಅಲ್ಲದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಆಯಾಮಗಳಲ್ಲೂ ನಿಷ್ಪಕ್ಷಪಾತ ಹಾಗೂ ಸಮಗ್ರ  ರೀತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ.

ನಿರಪರಾಧಿ ಬಾಲಕನ ಸಾವಿನ ಪ್ರಕರಣದಲ್ಲಿ ಸತ್ಯ ಹೊರಬಂದು ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ನಮ್ಮ ಪ್ರಯತ್ನ ಕುಟುಂಬಸ್ಥರೊಂದಿಗೆ ನಿರಂತರವಾಗಿರಲಿದೆ.

- Advertisement -

Latest News

error: Content is protected !!