Monday, June 8, 2026
Homeತಾಜಾ ಸುದ್ದಿಗ್ರಾಹಕರ ಜೇಬಿಗೆ ಮತ್ತೆ ಕತ್ತರಿ; 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 29 ರೂ. ಏರಿಕೆ

ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ; 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 29 ರೂ. ಏರಿಕೆ

- Advertisement -
- Advertisement -

ನವದೆಹಲಿ: ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ ಬಿದ್ದಿದ್ದು 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 29 ರೂ. ಏರಿಕೆಯಾಗಿದೆ.

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಈ ನಿರ್ಧಾರ ಕೈಗೊಂಡಿದ್ದು ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ.

ಕಳೆದ ಮೂರು ತಿಂಗಳಲ್ಲಿ ಅಡುಗೆ ಅನಿಲ ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದೆ. ಇದಕ್ಕೂ ಮುನ್ನ ಮಾರ್ಚ್ 7 ರಂದು ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ ಮಾಡಲಾಗಿತ್ತು.ಇದರೊಂದಿಗೆ ದೆಹಲಿಯಲ್ಲಿ ಇದುವರೆಗೆ 913 ಇದ್ದ ಸಿಲಿಂಡರ್ ಬೆಲೆ ಈಗ 942 ರೂ. ಕ್ಕೆ ತಲುಪಿದೆ.

ಜೂನ್ 1 ರಂದೇ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 42 ರೂ. ರಷ್ಟು ಹೆಚ್ಚಿಸಲಾಗಿತ್ತು. ಜಾಗತಿಕ ಮಾರುಕಟ್ಟೆಯ ಏರಿಳಿತದಿಂದಾಗಿ ಇತ್ತೀಚಿನ ವಾರಗಳಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದರಗಳಲ್ಲೂ ಸಹ ಏರಿಕೆ ಕಂಡುಬಂದಿದೆ. 

- Advertisement -

Latest News

error: Content is protected !!