Tuesday, June 9, 2026
Homeಕರಾವಳಿಮಂಗಳೂರುಮಂಗಳೂರು; 5 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಗಳ ಬಂಧನ

ಮಂಗಳೂರು; 5 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರು; 5 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ನರಿಂಗಾಣ ಗ್ರಾಮದ ಅಬ್ದುಲ್ ಖಾದರ್ ತನ್ಸಿಪ್ @ ತಂಜಿ ಹಾಗೂ ಮಂಗಳೂರಿನ ಅಡ್ಯಾರ ಕಣ್ಣೂರ ನಿವಾಸಿ  ಮೊಹಮ್ಮದ್ ರಾಜೀಕ್ ಬಂಧಿತರು.

ಅಬ್ದುಲ್ ಖಾದ‌ರ್ ತನ್ಸಿಪ್ @ ತಂಜಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದುದರಿಂದ ನ್ಯಾಯಾಲಯವು ಆರೋಪಿತ ವಿರುದ್ಧ ವಾರೆಂಟ್ ನ್ನು ಹೊರಡಿಸಿರುತ್ತದೆ. ಅಲ್ಲದೇ ಆರೋಪಿತ ವಿರುದ್ಧ ಕೊಣಾಜೆ, ಮಂಜೇಶ್ವ‌ರ್, ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ.

ಮೊಹಮ್ಮದ್ ರಾಜೀಕ್ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣವಿದ್ದು ಇದಕ್ಕೆ ಸಂಬಂಧಿಸಿದಂತೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಇದುದರಿಂದ ಮಾನ್ಯ ನ್ಯಾಯಾಲಯವು ಆರೋಪಿತನ ವಿರುದ್ಧ ವಾರೆಂಟ್ ನ್ನು ಹೊರಡಿಸಿರುತ್ತದೆ. ಅಲ್ಲದೇ ಆರೋಪಿ ವಿರುದ್ಧ ಕಂಕನಾಡಿ, ಬೆಳ್ತಂಗಡಿ, ಪುತ್ತೂರು, ಕದ್ರಿ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುತ್ತವೆ.

ನ್ಯಾಯಾಲಯಕ್ಕೆ ಹಾಜರಾಗದೇ ಬಂಧನಕ್ಕೆ ಸಿಗದೇ, ತಲೆಮರೆಸಿಕೊಂಡಿದ್ದ ಪ್ರತ್ಯೇಕ ಪ್ರಕರಣಗಳ ಆರೋಪಿಗಳಾದ ಅಬ್ದುಲ್ ಖಾದರ್ ತನ್ಸಿಪ್ @ ತಂಜಿ ಮತ್ತು ಮೊಹಮ್ಮದ್ ರಾಜೀಕ್ ಎಂಬುವರನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಪತ್ತೆ ಮಾಡಿ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

- Advertisement -

Latest News

error: Content is protected !!